ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತೇವೆ. ನಾನು ಯಾವುದೇ ಖಾತೆಯ ನಿರೀಕ್ಷೆ ಮಾಡಿಲ್ಲ, ಬೇಡಿಕೆ ಕೂಡ ಇಡುವುದಿಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಶಾಸಕ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
ಇಂದು ಸಿಎಂ ಮತ್ತು ಡಿಸಿಎಂ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು 8 ಶಾಸಕರಿಗೆ ಸಚಿವ ಸ್ಥಾನ ಒಲಿದಿದೆ. ಈ ನಡುವೆ ಅವರು ಸಹ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಮಲಿಂಗರೆಡ್ಡಿ, ಆದಷ್ಟು ಬೇಗ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮಾಡುತ್ತೇವೆ. ಮಳೆ ಸಂದರ್ಭದಲ್ಲಿ ಜನರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದರು.