ಮನೆ ರಾಜಕೀಯ ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

0

ಬೆಂಗಳೂರು: ಕಾಂಗ್ರೆಸ್ ಪಕ್ಷ, ಕರ್ನಾಟಕದಲ್ಲಿ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ.

Join Our Whatsapp Group

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದು, ಖಾತೆಗಳು ಹಂಚಿಕೆ ಇನ್ನಷ್ಟೇ ನಡೆಯಬೇಕಾಗಿದೆ.

ಎಂಟು ಸಚಿವರ ಮಾಹಿತಿ

1.     ಎಂ. ಬಿ. ಪಾಟೀಲ್

2.     ಡಾ. ಜಿ. ಪರಮೇಶ್ವರ್

3.     ಪ್ರಿಯಾಂಕ ಖರ್ಗೆ

4.     ಕೆ.ಎಚ್. ಮುನಿಯಪ್ಪ

5.     ಕೆ. ಜೆ. ಜಾರ್ಜ್

6.     ಸತೀಶ್ ಜಾರಕಿಹೊಳಿ

7.     ಜಮೀರ್ ಅಹ್ಮದ್ ಖಾನ್

8.     ರಾಮಲಿಂಗಾ ರೆಡ್ಡಿ

ಪದಗ್ರಹಣ ಸಮಾರಂಭದಲ್ಲಿ ಪ್ರಮುಖವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ನಟ ಕಮಲ್ ಹಾಸನ್, ನಟ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ರಾಜೇಂದ್ರ ಸಿಂಗ್ ಬಾಬು, ದುನಿಯಾ ವಿಜಯ್, ನಟಿ ರಮ್ಯಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.