ಬೆಂಗಳೂರು: ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವ ಕುರಿತು ಮಾಹಿತಿ ನೀಡಿದರು.
ನಮ್ಮ ಸರ್ಕಾರ ರಚನೆ ಮೇಲೆ ಇದು ಮೊದಲ ಸುದ್ದಿಗೋಷ್ಠಿ. ನಾನು, ಡಿಕೆ ಶಿವಕುಮಾರ್, 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದೇವೆ. ಬೇರೆ ರಾಜ್ಯಗಳ ಸಿಎಂಗಳು, ವಿಪಕ್ಷ ನಾಯಕರು ಬಂದಿದ್ದರು. ಬಿಜೆಪಿಯೇತರ ಪಕ್ಷಗಳ ಅಧ್ಯಕ್ಷರು ಬಂದು ಶುಭಕೋರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಶುಭ ಕೋರಿದ್ದಾರೆ. ನಾವು ಸಹ ರಾಜ್ಯದ ಜನರಿಗೆ ಧನ್ಯವಾದ ಸಲ್ಲಿಸಿದ್ದೇವೆ ಎಂದರು.
ಇದೇ ವೇಳೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಪ್ರಮಾಣ ವಚನ ಭೋದಿಸಬೇಕಿರುವ ಕಾರಣ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸಲಾಗುತ್ತದೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ನೇಮಕಗೊಳ್ಳಲಿದ್ದಾರೆ.
ಬಳಿಕ ನೂತನ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಸೋಮವಾರ, ಮಂಗಳವಾರ, ಬುಧವಾರ ವಿಧಾನಸಭೆ ಅಧಿವೇಶನ ಕರೆಯುತ್ತಿದ್ದೇವೆ, ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸನ್ನಿಹಿತದಲ್ಲಿಯೇ ಪುನರಾರಂಭ ಮಾಡಲಾಗುವುದು ಎಂದೂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಘೋಷಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.