ಮನೆ ರಾಜಕೀಯ ಕಲ್ಯಾಣ ಕರ್ನಾಟಕಕ್ಕೆ ಇನ್ನೂ 3-4 ಸಚಿವ ಸ್ಥಾನ: ಮಲ್ಲಿಕಾರ್ಜುನ ಖರ್ಗೆ

ಕಲ್ಯಾಣ ಕರ್ನಾಟಕಕ್ಕೆ ಇನ್ನೂ 3-4 ಸಚಿವ ಸ್ಥಾನ: ಮಲ್ಲಿಕಾರ್ಜುನ ಖರ್ಗೆ

0

ಕಲಬುರಗಿ: ಆಡಳಿತಾತ್ಮಕ ಅನುಮೋದನೆಯ ಹಿನ್ನೆಲೆಯಲ್ಲಿ ಕೇವಲ ಎಂಟು ಜನ ಸಚಿವರ ಸರ್ಕಾರ ರಚನೆ ಮಾಡಲಾಗಿದೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ಶೀಘ್ರವೇ ವಿಸ್ತರಣೆಯಾಗಲಿದ್ದು, ಕಲ್ಯಾಣ ಕರ್ನಾಟಕಕ್ಕೆ ಇನ್ನೂ ನೂರು ನಾಲ್ಕು ಸಚಿವ ಸ್ಥಾನ ಸಿಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದರು.

Join Our Whatsapp Group

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕ ಭಾಗಗಳಲ್ಲೂ ಕೂಡ ಜಾತಿವಾರು ಪ್ರಾತಿನಿಧ್ಯದ ಆಧಾರದ ಮೇಲೆ ಮತ್ತು ಸಣ್ಣ ಸಣ್ಣ ಸಮುದಾಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಚಿವ ಸ್ಥಾನಗಳ ಘೋಷಣೆ ಸಾಧ್ಯತೆಯಿದೆ ಎಂದು ಇಂಗಿತ ವ್ಯಕ್ತಪಡಿಸಿದರು.

ಈಗಾಗಲೇ ನಾವು ರಾಜ್ಯದಲ್ಲಿ ಜನರಿಗೆ ಮಾತು ಕೊಟ್ಟಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಪ್ರಮುಖ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದ ಅನುಮೋದನೆ ನೀಡಲಾಗಿದೆ. ಶೀಘ್ರವೇ ಕಾನೂನಾಗಿ ಜಾರಿಯಾಗಲಿದೆ ಎಂದರು.

ಕಲಬುರಗಿಗೆ ಇನ್ನೂ ಸಚಿವ ಸ್ಥಾನ ಸಿಗಲಿಗೆ ಸಿಗಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಸಾಮಾಜಿಕ ನ್ಯಾಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜಾತಿವಾರು ಸಚಿವ ಸ್ಥಾನ ನೀಡುವ ಉದ್ದೇಶ ಇರುವುದರಿಂದ ಸಾಧ್ಯತೆ ಇದೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಚುನಾವಣೆಗಳಲ್ಲಿ ನೀಡಿರುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ಐದು ನಿರ್ಣಯಗಳನ್ನು ಈಗಾಗಲೇ ಕೈ ಕೊಡಲಾಗಿದೆ. ಇದರಿಂದ ಜನತೆಗೆ ಭರವಸೆ ಉಂಟಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುವ ಆಶಯವಿದೆ ಎಂದರು.

ರಾಜ್ಯದಲ್ಲಿನ ಗೆಲುವು ಕಾಂಗ್ರೆಸ್ ಗೆಲುವಲ್ಲ ಇದು ಜನ ಜನರ ಗೆಲುವಾಗಿದೆ ಎಂದರು.

ಈ ವೇಳೆಯಲ್ಲಿ ಡಿಸಿಸಿ ಅಧ್ಯಕ್ಷ ಜಗದೇವ ಗಯತ್ತೇದಾರ, ರಾಜಗೋಪಾಲರೆಡ್ಡಿ ಮುದಿರಾಜ್ ಇದ್ದರು.