ಮನೆ ಅಪರಾಧ ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವು

ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವು

0

ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಶೂ ಲೇಸ್ ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ.

Join Our Whatsapp Group

ಸುನೀಲ್ ಮೃತ ರೌಡಿ ಶೀಟರ್. ಇತನ ಸಾವು ಇದೀಗ ಹಲವಾರು ಮೂಡಿಸಿದೆ. ಹೌದು ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ.

ಈ ರೌಡಿಶೀಟರ್​ ಸುನೀಲ್​ ‘ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಆತ. ಇನ್ನು ಹತ್ತು ದಿನಗಳಲ್ಲಿ ಅಂದರೆ ಜೂನ್​.2 ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ.

ಬಾತ್’ರೂಮ್’​ನಲ್ಲಿ ನನ್ನ ಶವ ಸೀಗಬಹುದು ಹೇಳಿದ್ದ ಸುನೀಲ್​ಹೌದು ಕೊಲೆ ಮಾಡಿ ಜೈಲು ಸೇರಿದ್ದ ಸುನೀಲ್​ ‘ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಅಥವಾ ಬಾತ್ ರೂಮ್ ​ನಲ್ಲಿ ನಾನೇ ನೇಣುಹಾಕಿಕೊಂಡ ರೀತಿ ನಿಮಗೆ ಸಿಗಬಹುದು ಎಂದು ಸಹ ಹೆಳಿಕೊಂಡಿದ್ದ. ಈ ಹಿಂದೆ ಕೊಲೆಯಾಗಿದ್ದ ವಿನೋದ್ ಮಾಜಿ ಕಾರ್ಪೊರೇಟರ್ ಓರ್ವರ ಅಣ್ಣನ ಮಗನಾಗಿದ್ದ. ಈತನ ರೌಡಿಶೀಟರ್​ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇನ್ನು ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಶುರು ಮಾಡಿದ್ದಾರೆ.