ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ? ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು ಹಿತನುಡಿಗಳನ್ನು ಹೇಳಿದರು.
19 ಸೀಟು ಗೆದ್ದಿದ್ದೇವೆ ಎಂಬ ಆತಂಕ ಬೇಡ. 119 ಸೀಟು ಗೆಲ್ಲುವ ದಿಕ್ಕಿನಲ್ಲಿ ಕೆಲಸ ಮಾಡೋಣ. ನಾನು ಬದುಕಿರುವ ತನಕ ಪಕ್ಷಕ್ಕಾಗಿ ದುಡಿಯುತ್ತೇನೆ. ನೀವು ಯಾರೂ ಧೈರ್ಯ ಕಳೆದುಕೊಳ್ಳಬೇಡಿ. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಳ್ಳೋಣ. ಜನರ ಜತೆ ನಿಂತು ಕೆಲಸ ಮಾಡೋಣ. ಪ್ರಾಮಾಣಿಕತೆ, ಬದ್ಧತೆ, ಆಚಲತೆಯಿಂದ ದುಡಿದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಲ್ಲ ಎಂದರು.
ನಾನು ಕೂಡ ಸೋತಿದ್ದೇನೆ, ಗೆದ್ದಿದ್ದೇನೆ. ಸೋತಾಗ ಹೆದರಿ ಮನೆ ಸೇರಿಕೊಂಡಿಲ್ಲ, ಗೆದ್ದಾಗ ಬೀಗಿಲ್ಲ. ಎಲ್ಲಾ ಸಮಯದಲ್ಲೂ ಶ್ರದ್ಧೆ, ವಿನಯದಿಂದ ಜನರ ಕೆಲಸ ಮಾಡಿದ್ದೇನೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಿದ್ದೇನೆ ಎಂದು ಹೇಳಿದರು.
1962ರಲ್ಲಿ ಪಕ್ಷೇತರ ಶಾಸಕನಾಗಿ ಗೆದ್ದುಬಂದು ಈ ನೆಲ ಜಲಕ್ಕಾಗಿ ಹೋರಾಟ ನಡೆಸಿದವನು ನಾನು. ಒಬ್ಬನೇ ಶಾಸಕ ಎಂದು ನಾನು ಕೈಕಟ್ಟಿ ಕೂತಿದ್ದರೆ ಕಾವೇರಿ ನೀರಿನ ಸದ್ಬಳಕೆ ಸಾಧ್ಯ ಆಗುತ್ತಿತ್ತಾ? ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ತಲೆ ಎತ್ತುತ್ತಿದ್ದವಾ? ಮನಸ್ಸಿಟ್ಟು ಯೋಚನೆ ಮಾಡಿ, ಅಧೈರ್ಯಪಟ್ಟರೆ ಉಪಯೋಗವಿಲ್ಲ. ನಿಮ್ಮ ಜತೆ ಕುಮಾರಸ್ವಾಮಿ ಅವರು ನಿಲ್ಲುತ್ತಾರೆ, ಹೋರಾಟ ಮಾಡಿ ಎಂದರು.
ಮುಂದೆ ಅನೇಕ ಚುನಾವಣೆಗಳು ಬರಲಿವೆ. ಲೋಕಸಭೆ ಚುನಾವಣೆ ಕೂಡ ಬರುತ್ತದೆ. ಈಗಿನಿಂದಲೇ ಕೆಲಸ ಮಾಡಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿ. ನಿಮ್ಮ ಜತೆ ನಾನು, ಕುಮಾರಸ್ವಾಮಿ ಅವರು ಇರುತ್ತೇವೆ. ಹೆದರಿ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹೆದರಿ ಕೂತರೆ ಏನನ್ನೂ ಸಾಧನೆ ಮಾಡಿದಂತೆ ಆಗುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ನೂತನ ಶಾಸಕರ ಜತೆ ಮಾತುಕತೆ ನಡೆಸಿದರು.
ಈ ಸರಕಾರ ಗ್ಯಾರಂಟಿಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ. ಆಗಲೇ ಅಧಿಕಾರಕ್ಕಾಗಿ ಕಿರಿಕಿರಿ ಮಾಡಿಕೊಳ್ಳುತ್ತಿದ್ದಾರೆ. ನಮಗೆ ಅವರ ರಾಜಕೀಯ ಬೇಕಿಲ್ಲ. ಜನತೆಗೆ ಅವರು ಕೊಟ್ಟ ವಚನ ಪಾಲಿಸುವಂತೆ ಹೋರಾಟ ಮಾಡೋಣ ಎಂದರು.
ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಪಕ್ಷದ ಎಲ್ಲಾ ನೂತನ ಶಾಸಕರು ಸಭೆಯಲ್ಲಿ ಹಾಜರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.