ಟಾಸ್ ಗೆದ್ದ ಮುಂಬೈ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಇಂದು ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರ ಬಿದ್ದರೆ, ಗೆಲ್ಲುವ ತಂಡ ಕ್ವಾಲಿಫೈಯರ್ 1ನೇ ಪಂದ್ಯದಲ್ಲಿ ಸೋತ ತಂಡದ ಜೊತೆಗೆ ಕ್ವಾಲಿಫೈಯರ್ 2ರಲ್ಲಿ ಕಣಕ್ಕಿಳಿಯಲಿದೆ.
ಲಕ್ನೋ ಸೂಪರ್ ಜೈಂಟ್ಸ್
ಕೃನಾಲ್ ಪಾಂಡ್ಯ (ನಾಯಕ), ಆಯುಷ್ ಬದೋನಿ, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಯಶ್ ಠಾಕೂರ್, ಮೊಹ್ಸಿನ್ ಖಾನ್.
ಮುಂಬೈ ಇಂಡಿಯನ್ಸ್
ಇಶಾನ್ ಕಿಶನ್, ರೋಹಿತ್ ಶರ್ಮಾ, ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್, ಆಕಾಶ್ ಮಧ್ವಲ್, ಹೃತಿಕ್ ಶೋಕಿನ್