ಕಾರವಾರ(ಉತ್ತರಕನ್ನಡ): ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಹೊನ್ನಾವರ ತಾಲೂಕಿನ ಮಂಕಿ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.
ಹೊನ್ನಾವರದ ಮಂಕಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದ್ದು, ಅಪಘಾತದಿಂದಾಗಿ ಕಾರು ಹಾಗೂ ಬಸ್ ನಲ್ಲಿದ್ದವರು ಸೇರಿ 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.
ತಡರಾತ್ರಿ ಬ್ರೆಝಾ ಕಾರಿನಲ್ಲಿ ಸಾಗುತ್ತಿದ್ದ ಜಿ.ಪಂ.ನ ಗುತ್ತಿಗೆದಾರ ಮೋಹನ್ ನಾಯ್ಕ ಎಂಬುವವರು ಮಂಕಿಯಲ್ಲಿ ಒಳರಸ್ತೆಗೆ ಕಾರನ್ನು ಕ್ರಾಸ್ ಮಾಡುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್, ಕಾರಿಗೆ ಗುದ್ದಿದೆ. ಬಸ್ ಚಾಲಕ ಅಪಘಾತ ತಡೆಯಲು ಯತ್ನಿಸಿದ್ದನಾದರೂ ಕಾರಿಗೆ ಡಿಕ್ಕಿಯಾದ ಪರಿಣಾಮ ಬಸ್ ಕೂಡ ಪಲ್ಟಿಯಾಗಿದೆ.
ಗಂಭೀರ ಗಾಯಗೊಂಡ ಕಾರು ಚಾಲಕ ಮೋಹನ್ ನಾಯ್ಕ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯರ ಸಹಕಾರದಿಂದ ಗಾಯಗೊಂಡ ಬಸ್ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಈ ಬಗ್ಗೆ ಹೊನ್ನಾವರ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.