ಮನೆ ಕಾನೂನು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಗೆ ಮರಣದಂಡನೆ ವಿಧಿಸಲು ಕೋರಿ ದೆಹಲಿ ಹೈಕೋರ್ಟ್ ಗೆ...

ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಗೆ ಮರಣದಂಡನೆ ವಿಧಿಸಲು ಕೋರಿ ದೆಹಲಿ ಹೈಕೋರ್ಟ್ ಗೆ ಎನ್ಐಎ ಅರ್ಜಿ

0

ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ ಎಫ್) ಮುಖ್ಯಸ್ಥ ಮತ್ತು ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಮರಣದಂಡನೆ ವಿಧಿಸುವಂತೆ ಕೋರಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

Join Our Whatsapp Group

ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರಿದ್ದ ವಿಭಾಗೀಯ ಪೀಠ ಮೇ 29ರಂದು ಅರ್ಜಿಯ ವಿಚಾರಣೆ ನಡೆಸಲಿದೆ.

ಭಯೋತ್ಪಾದನೆಗೆ ನಿಧಿ ಸಂಗ್ರಹಿಸಿದ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡಿದ್ದ ಮಲಿಕ್ ಗೆ ಮೇ 2022ರಲ್ಲಿ ವಿಚಾರಣಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮಲಿಕ್ಗೆ ಮರಣದಂಡನೆ ವಿಧಿಸುವಂತೆ ವಿಚಾರಣಾ ನ್ಯಾಯಾಲಯದಲ್ಲಿ ಕೂಡ ಎನ್ ಐಎ  ಒತ್ತಾಯಿಸಿತ್ತು. ಆದರೆ ಇದನ್ನು ನಿರಾಕರಿಸಿದ್ದ ವಿಶೇಷ ನ್ಯಾಯಾಲಯ “ಸಮಾಜದ ಸಾಮೂಹಿಕ ಪ್ರಜ್ಞೆಗೆ ಆಘಾತ ತಂದ” ಅಪರೂಪದ ಪ್ರಕರಣಗಳಲ್ಲಿ ಮಾತ್ರ ಆರೋಪಿಗೆ ಮರಣದಂಡನೆ ನೀಡಬಹುದು ಎಂದು ಪೀಠ ಹೇಳಿತ್ತು.

ಐಪಿಸಿ ಸೆಕ್ಷನ್ 120 ಬಿ, 121, 121 ಎ ಮತ್ತು ಐಪಿಸಿ ಸೆಕ್ಷನ್ 120 ಬಿ ಸಹ ವಾಚನದೊಂದಿಗೆ ಯುಎಪಿಎ ಸೆಕ್ಷನ್ 13 ಮತ್ತು 15 ಅಲ್ಲದೆ ಯುಎಪಿಎ ಗೆ ಸಂಬಂಧಿಸಿದ 17, 18, 20, 38 ಮತ್ತು 39ನೇ ಸೆಕ್ಷನ್ ಗಳಡಿಯ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.