ಚಾಮರಾಜನಗರ: ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಅವಕಾಶ ಕೈತಪ್ಪಿದ ಹಿನ್ನಲೆಯಲ್ಲಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರು, ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದ ಸಮಾಜದವರು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದರು.
ಉಪ್ಪಾರ ಸಮಾಜದ ಏಕೈಕ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದರು. ಕೊನೆ ಕ್ಷಣದಲ್ಲಿ ಅವರ ಹೆಸರನ್ನು ಕೈಬಿಟ್ಟು ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಮುಖಂಡರು ಆರೋಪಿಸಿದರು.
ರಾಜ್ಯದಲ್ಲಿ ಉಪ್ಪಾರರು 40 ಲಕ್ಷದಷ್ಟು ಜನರಿದ್ದಾರೆ. ಅವರ ಪ್ರತಿನಿಧಿಯಾಗಿ ಪುಟ್ಟರಂಗಶೆಟ್ಟಿ ಒಬ್ಬರೇ ಇದ್ದಾರೆ. ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಾನಿಯಾಗಬಹುದು. ಕೊಟ್ಟ ಭರವಸೆಯಂತೆ ಅವರನ್ನು ಸಚಿವರನ್ನಾಗಿ ಮಾಡಬೇಕು. ಇಲ್ಲದಿದ್ದರೆ ಸೋಮವಾರ ಚಾಮರಾಜನಗರ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.
ಆತ್ಮಹತ್ಯೆ ಬೆದರಿಕೆ
ಈ ಮಧ್ಯೆ, ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ನಂಬಿಕೆ ದ್ರೋಹ ಮಾಡಿದ್ದು, ಇದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಾಲ್ಲೂಕಿನ ನಲ್ಲೂರು ಮೋಳೆಯ ಚಂದ್ತಶೇಖರ್ ಎಂಬುವವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ವಾಟ್ಸ್ ಆ್ಯಪ್ ನಲ್ಲಿ ಹರಿದಾಡುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.