ಮನೆ ರಾಜ್ಯ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಅಪಘಾತ: ನಾಲ್ವರ ಸಾವು

ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಅಪಘಾತ: ನಾಲ್ವರ ಸಾವು

0

ಮೈಸೂರು: ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.

Join Our Whatsapp Group

ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.