ಮನೆ ಕ್ರೀಡೆ ಐಪಿಎಲ್:  ಏಪ್ರಿಲ್‌ನಿಂದ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ

ಐಪಿಎಲ್:  ಏಪ್ರಿಲ್‌ನಿಂದ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ

0

ಮಹಾರಾಷ್ಟ್ರ:   ಏಪ್ರಿಲ್‌ ತಿಂಗಳಿನಿಂದ  ಕ್ರೀಡಾಂಗಣದಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾರ್ಚ್‌ 26ರಿಂದ ಪ್ರಾರಂಭಗೊಂಡ ಐಪಿಎಲ್ 15ನೇ ಸೀಸನ್‌ನಲ್ಲಿ 10 ತಂಡಗಳು ಭಾಗವಹಿಸಿದ್ದು, ಮೇ 29ರವರೆಗೆ ಲೀಗ್ ಪಂದ್ಯಗಳು ನಡೆಯಲಿವೆ. ಎಲ್ಲಾ ಪಂದ್ಯಗಳು ಮಹಾರಾಷ್ಟ್ರದ ನಾಲ್ಕು ಸ್ಟೇಡಿಯಂನಲ್ಲಿ ನಡೆಯಲಿದ್ದು, ವಾಂಖೆಡೆ, ಡಿ.ವೈ ಪಾಟೀಲ್ ಸ್ಟೇಡಿಯಂ, ಬರ್ಬೋನ್ ಸ್ಟೇಡಿಯಂ, ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಾಲ್ಕು ಪಂದ್ಯಗಳು ನಡೆಯಲಿವೆ.

“ಕೋವಿಡ್-19 ಪ್ರಕರಣಗಳ ಸಂಖ್ಯೆಯು ತೀವ್ರವಾಗಿ ಕಡಿಮೆಯಾಗಿದೆ, IPL-15 ರಲ್ಲಿ ಪ್ರೇಕ್ಷಕರ ಸಾಮರ್ಥ್ಯವನ್ನು 50% ಗೆ ಹೆಚ್ಚಿಸಲು ರಾಜ್ಯ ಸರ್ಕಾರವು ಉತ್ಸುಕವಾಗಿದೆ” ಎಂದು  ಮೂಲಗಳು ತಿಳಿಸಿದೆ.

ಏತನ್ಮಧ್ಯೆ, ಮಾಜಿ ಐಸಿಸಿ, ಬಿಸಿಸಿಐ ಮತ್ತು ಎಂಸಿಎ ಅಧ್ಯಕ್ಷ ಶರದ್ ಪವಾರ್ ಅವರು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರಲ್ಲಿ ಪ್ರೇಕ್ಷಕರ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.