ಮನೆ ರಾಷ್ಟ್ರೀಯ ವೈಷ್ಣೋದೇವಿ ದರ್ಶನಕ್ಕೆ ಬರುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ದುರ್ಮರಣ

ವೈಷ್ಣೋದೇವಿ ದರ್ಶನಕ್ಕೆ ಬರುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ದುರ್ಮರಣ

0

ಶ್ರೀನಗರ: ಖಾಸಗಿ ಬಸ್ಸೊಂದು ಸೇತುವೆಯಿಂದ ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ಸಾವಿಗೀಡಾದ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಜಜ್ಜರ್ ಕೋಟ್ಲಿ ಬಳಿ ಇಂದು ನಸುಕಿನ ಜಾವ ನಡೆದಿದೆ.

Join Our Whatsapp Group

ಅಮೃತಸರದಿಂದ ಮಾತಾ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆ ತರುತ್ತಿದ್ದ ಬಸ್ ಜಜ್ಜರ್ ಕೋಟ್ಲಿ ಬಳಿ ಸೇತುವೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ10 ಮಂದಿ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ ಒಟ್ಟು 75 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಗಾಯಗೊಂಡವರನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.