ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎರಡ್ಮೂರು ವರ್ಷಗಳಿಂದ 3000 ಕೋಟಿ ರೂ. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಇಲಾಖಾ ತನಿಖೆ ನಡೆಸಲು ಆದೇಶಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.
ಅದರಂತೆ ಇದೀಗ ಸಿದ್ದರಾಮಯ್ಯ ಅವರು ಈ ಕೂಡಲೇ ಈ ವಿಷಯದ ಕುರಿತು ನಿರ್ದಾಕ್ಷಿಣ ಇಲಾಖಾ ತನಿಖೆ ನಡೆಸಲು ಆದೇಶ ಹೊರಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಲಾಗಿದೆ? ಯಾವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬುದರ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಥರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಪತ್ರ ಮೂಲಕ ಸಿಎಂ ಗಮನಕ್ಕೆ ತಂದಿರುವ ಪ್ರಿಯಾಂಕ್ ಖರ್ಗೆ
ಇನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಸಂಘದಿಂದ ಅನುದಾನ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿದ್ದರಾಮಯ್ಯನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದರು. ಸಿಎಂ ವಿವೇಚನ ಕೋಟಾದಲ್ಲಿ ಅಭಿವೃದ್ಧಿ ಮಂಡಳಿ ಸಿದ್ಧಪಡಿಸಿದ ಕ್ರಿಯಾ ಯೋಜನೆಯಲ್ಲಿ ಅಕ್ರಮ ಆಗಿದೆ. ಅಭಿವೃದ್ಧಿ ಮಂಡಳಿಯ ಕಳಪೆ ಕಾಮಗಾರಿ ಬಗ್ಗೆ ಸಿಎಜಿ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ಮಾಡುವ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.