ಮನೆ ಅಪರಾಧ ಬೆಂಗಳೂರಿನ ಹೋಟೆಲ್ ನಲ್ಲಿ ಅಗ್ನಿ ಅವಘಡ: ಪೀಠೋಪಕರಣಗಳು ಬೆಂಕಿಗಾಹುತಿ

ಬೆಂಗಳೂರಿನ ಹೋಟೆಲ್ ನಲ್ಲಿ ಅಗ್ನಿ ಅವಘಡ: ಪೀಠೋಪಕರಣಗಳು ಬೆಂಕಿಗಾಹುತಿ

0

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಗಳೂರಿನ ಆರ್ ಆರ್ ನಗರದ ಹೋಟೆಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಜನರು ಆತಂಕಗೊಂಡಿದ್ದಾರೆ.

ಬೆಂಕಿ ಹೊತ್ತಿಕೊಂಡ ರಭಸಕ್ಕೆ ಹೋಟೆಲ್‌ ಗೋಡೆಯೆಲ್ಲ ಸುಟ್ಟು ಕರಕಲಾಗಿದೆ. ಹೋಟೆಲ್ ಕೋಣೆಯ ಒಳಗಿದ್ದ ಪೀಠೋಪಕರಣಗಳೆಲ್ಲ ಬೆಂಕಿಗೆ ಆಹುತಿಯಾಗಿದೆ. ಗ್ರಾಹಕರು ಕೂರುತ್ತಿದ್ದ ಚೇರ್‌, ಟೇಬಲ್‌ಗಳೆಲ್ಲ ಸುಟ್ಟು ಭಸ್ಮವಾಗಿವೆ.

ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ಹೋಟೆಲ್ ಸಿಬ್ಬಂದಿಯೆಲ್ಲ ಹೊರಕ್ಕೆ ಓಡಿ ಬಂದಿದ್ದಾರೆ.

ಬಳಿಕ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬಂದಿದ್ದಾರೆ.  ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ಸ್ಥಳೀಯರು, ಹೋಟೆಲ್ ಸಿಬ್ಬಂದಿ, ಹಾಗೂ ಪೊಲೀಸರ ಸಹಾಯದಿಂದ ಬೆಂಕಿ ನಂದಿಸಿದ್ದಾರೆ.