ಮನೆ ರಾಜಕೀಯ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ: ನಟ ಚೇತನ್

ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ: ನಟ ಚೇತನ್

0

ಬೆಂಗಳೂರು: ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎನ್ನುವುದಾದರೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ  ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಟಿಪ್ಪುವಿನ ಬಗ್ಗೆ ಇದ್ದ ವೈಭವೀಕರಣಕ್ಕೆ ಕತ್ತರಿ ಹಾಕಿ ಕೆಲ ಶಿಫಾರಸು ಮಾಡಿದೆ. ಪ್ರಸ್ತುತ ಈ ವಿಚಾರ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ನಟ ಚೇತನ್ ತಮ್ಮ ಅಭಿಪ್ರಾಯ  ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಸ್ಲಿಂ ಆದ ಯಾವುದೇ ವ್ಯಕ್ತಿಯನ್ನು ಗುರಿಯಾಗಿಸುವುದರ ಮೂಲಕ ನಮ್ಮ ಇತಿಹಾಸಗಳನ್ನು ಹಿಂದುತ್ವಗೊಳಿಸುತ್ತಿದೆ. ಟಿಪ್ಪು ಸುಲ್ತಾನ್ ನನ್ನು ಇನ್ನು ಮುಂದೆ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆಯುವಂತಿಲ್ಲ. ಬ್ರಿಟಿಷರ ವಿರುದ್ಧ ಹೋರಾಡುತ್ತ ಯುದ್ಧ ಭೂಮಿಯಲ್ಲಿ ಮಡಿದ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದಾದರೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡಾ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದಿದ್ದಾರೆ.