ಮನೆ ರಾಜಕೀಯ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದಲೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಹೆಚ್ ಡಿಕೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದಲೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಹೆಚ್ ಡಿಕೆ

0

ರಾಮನಗರ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ.  ಅಂದು ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.

ಹಲಾಲ್ ವಿವಾದಕ್ಕೆ ಹೆಚ್ ಡಿಕೆ ಆಕ್ರೋಶ:

ರಾಜ್ಯದಲ್ಲಿ ಹಲಾಲ್, ಧರ್ಮ ವ್ಯಾಪಾರದ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ ಇದನ್ನ ತಡೆಯಲಿ. ಈ ಬೆಳವಣಿಗೆಗಳ ಬಗ್ಗೆ ಏನೂ ಗೊತ್ತಿಲ್ಲದಂತೆ ಇದ್ದರೆ ಏನರ್ಥ? ನಾನು ಈ ಪದವನ್ನು ಉಪಯೋಗ ಮಾಡಬಾರದು. ಆದರೆ ನಾನು ತಡೆಯಲಾರದೆ ಈ ಪದ ಬಳಸಿದ್ದೇನೆ. ಸಮಾಜ ಒಡೆಯುವ ಹ್ಯಾಂಡ್ ಬಿಲ್​ಗಳನ್ನ ಹಂಚುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳದವರು ಕಿಡಿಗೇಡಿಗಳು. ಇವರಿಗೆ ರೈತರ ಬದುಕಿನ ಬಗ್ಗೆ ಗೊತ್ತಿದ್ಯಾ?. ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ.  ಅದನ್ನು ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ಇಷ್ಟು ವರ್ಷ ಹಲಾಲ್ ತಿಂದಿದ್ದೇವೆ, ಏನಾಗಿದೆ ಚೆನ್ನಾಗಿದ್ದೀವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಗುತ್ತಾ, ದೇವರು ಮೆಚ್ಚಲ್ವಾ. ಹಲವಾರು ವರ್ಷಗಳಿಂದ ಹಲಾಲ್ ನಡೆಯುತ್ತಿದೆ, ಈಗಿನದ್ದಲ್ಲ.  ಆಸ್ಪತ್ರೆಗಳಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲಾಗಿಲ್ಲ. ಆಗ ಎಲ್ಲಿದ್ದರೂ ವಿಶ್ವ ಹಿಂದೂ ಪರಿಷತ್, ಬಜರಂಗದಳದವರು ಎಂದು ಪ್ರಶ್ನಿಸಿದ್ದು, ನನಗೆ ಮತ ಮುಖ್ಯವಲ್ಲ ಈ ನಾಡು ಶಾಂತಿಯಿಂದ ಇರಬೇಕು. ಕೇಸರಿ ಬಟ್ಟೆ ಹಾಕಿಕೊಂಡು ವಿಷ ಬೀಜ ಬಿತ್ತಲು ಬಿಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಲೇಖನವಿಧಾನ ಪರಿಷತ್ ಸದಸ್ಯತ್ವಕ್ಕೆ ಸಿಎಂ ಇಬ್ರಾಹಿಂ ನೀಡಿದ ರಾಜೀನಾಮೆ ಅಂಗೀಕಾರ
ಮುಂದಿನ ಲೇಖನಹಲಾಲ್ ವಿಚಾರ: ಸರ್ಕಾರ ಮೂಗು ತೂರಿಸುವುದಿಲ್ಲ ಎಂದ ಸಚಿವ ಬಿ.ಸಿ ನಾಗೇಶ್