ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಅಜೀಂ ಎಂಬುವರಿಗೆ ಸೇರಿದ ಸಂಗಮ್ ಡೆಕೋರೇಷನ್ & ಫರ್ನಿಚರ್ ಅಂಗಡಿ ಇದಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ.
ಈ ಕುರಿತು ಕೃಷ್ಣರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.