ಮನೆ ರಾಜ್ಯ ಕಾಳಗಿಯಲ್ಲಿ ಸರ್ಕಾರಿ ಬಸ್ ಪಲ್ಟಿ: ಹಲವರಿಗೆ ಗಾಯ

ಕಾಳಗಿಯಲ್ಲಿ ಸರ್ಕಾರಿ ಬಸ್ ಪಲ್ಟಿ: ಹಲವರಿಗೆ ಗಾಯ

0

ಕಾಳಗಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಹೊಸಳ್ಳಿ ಕ್ರಾಸ್ ಬಳಿ ಗುರುವಾರ ಮಧ್ಯಾಹ್ನ ಸರ್ಕಾರಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ.

Join Our Whatsapp Group

ಚಿಂಚೋಳಿ ಘಟಕಕ್ಕೆ ಸೇರಿದ ಬಸ್ಸು ಬೆಂಗಳೂರಿಗೆ ಹೊರಟಿತ್ತು, ಮಾರ್ಗ ಮಧ್ಯೆ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಬಸ್ಸಿನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಒಬ್ಬರಿಗೆ ಕಣ್ಣು, ಇನ್ನೊಬ್ಬರ ಕಾಲಿಗೆ ಗಂಭೀರ ಗಾಯವಾಗಿ ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇವರನ್ನು ಚಿಕಿತ್ಸೆಗಾಗಿ ಕಾಳಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಈ ಕುರಿತು ರಟಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.