ಮನೆ ರಾಜ್ಯ ತಿ.ನರಸೀಪುರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ತಿ.ನರಸೀಪುರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

0

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

Join Our Whatsapp Group

ಇಲ್ಲಿನ ಕೆ.ಆರ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದೀಪ್ (24) ಶುಕ್ರವಾರ ನಿಧನರಾದರು. ಅವರ ತಾಯಿ ಸರೋಜಾ ಹಾಗೂ ತಂದೆ ಕೊಟ್ರೇಶ್ ಅಪಘಾತದಲ್ಲಿ ಮೃತರಾಗಿದ್ದರು.

ಸಂದೀಪ್ ಗಂಭೀರವಾಗಿ ಗಾಯಗೊಂಡಿದ್ದರು. ಸೋಮವಾರ ಮಧ್ಯಾಹ್ನ ಅಪಘಾತ ಸಂಭವಿಸಿತ್ತು. ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದವರು ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದರು.