ಮನೆ ಮನರಂಜನೆ ಅಭಿಷೇಕ್ ಅಂಬರೀಷ್ ಮನೆಯಲ್ಲಿ ಮದುವೆ ಶಾಸ್ತ್ರಗಳು ಆರಂಭ

ಅಭಿಷೇಕ್ ಅಂಬರೀಷ್ ಮನೆಯಲ್ಲಿ ಮದುವೆ ಶಾಸ್ತ್ರಗಳು ಆರಂಭ

0

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗುತ್ತಿದ್ದಾರೆ. ಈ ಮದುವೆಗೆ ಈಗಾಗಲೇ ಭರದ ಸಿದ್ಧತೆ ನಡೆದಿದೆ.

Join Our Whatsapp Group

ಇಂದಿನಿಂದ (ಜೂನ್ 2) ಮದುವೆ ಶಾಸ್ತ್ರಗಳು ಆರಂಭ ಆಗಿವೆ. ವಿವಾಹಕ್ಕೂ ಮೊದಲು ನಡೆಯುವ ಅರಿಶಿಣ ಶಾಸ್ತ್ರದ ಕಾರ್ಯಗಳು ಆರಂಭ ಆಗಿವೆ. ಇದರಲ್ಲಿ ಅಭಿಷೇಕ್ ಕುಟುಂಬ ಭಾಗಿ ಆಗಿದೆ. ಈ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ.

ಸುಮಲತಾ ಅವರ ಮನೆಯನ್ನು ಬೆಳಕಿನಿಂದ ಅಲಂಕಾರ ಮಾಡಲಾಗಿದೆ. ಈಗಾಗಲೇ ಮನೆಯಲ್ಲಿ ಮದುವೆಯ ಕಳೆ ತುಂಬಿಕೊಂಡಿದೆ. ಈ ಫೋಟೋಗಳನ್ನು ಅಭಿಮಾನಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಭಿಷೇಕ್ ಅವರು ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

ಜೂನ್​ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಮದುವೆಗೆ ಆಪ್ತ ಬಳಗದವರು ಮಾತ್ರ ಹಾಜರಿ ಹಾಕಲಿದ್ದಾರೆ. ಇನ್ನು, ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಸುಮಾರು 1 ಲಕ್ಷ ಜನರು ಇದರಲ್ಲಿ ಭಾಗಿ ಆಗೋ ನಿರೀಕ್ಷೆ ಇದೆ.