ಮನೆ ರಾಜಕೀಯ ಶಿವಕುಮಾರ ಸ್ವಾಮೀಜಿಯ  ಜಯಂತಿಗೆ ಗೌರವ ನಮನ ಕೋರಿದ ಪ್ರಧಾನಿ ಮೋದಿ

ಶಿವಕುಮಾರ ಸ್ವಾಮೀಜಿಯ  ಜಯಂತಿಗೆ ಗೌರವ ನಮನ ಕೋರಿದ ಪ್ರಧಾನಿ ಮೋದಿ

0

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.

 ‘ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ’ ಎಂದು ಟ್ವೀಟಿಸಿದ್ದಾರೆ.

ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆಗೆ ಕ್ಷಣ ಗಣನೆ ಆರಂಭವಾಗಿದೆ. ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ಆರಂಭವಾಗಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ, ಇತರ ಮುಖಂಡರು ಭಾಗವಹಿಸಲಿದ್ದಾರೆ.