ಮನೆ ಸುದ್ದಿ ಜಾಲ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ: ಗದ್ದುಗೆ ಪೂಜೆ

ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ: ಗದ್ದುಗೆ ಪೂಜೆ

0

ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಸ್ವಾಮೀಜಿ ಗದ್ದುಗೆಗೆ ವಿಶೇಷ ಅಲಂಕಾರ ಮತ್ತ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿದವು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು‌.ಬೆಳಿಗ್ಗೆ ಮಠದ ಆವರಣದಲ್ಲಿ ರುದ್ರಾಕ್ಷಿ ರಥದಲ್ಲಿ ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿಯ ಮೆರವಣಿಗೆ ನಡೆಯಿತು.