ಮನೆ ಅಪರಾಧ ಹುಬ್ಬಳ್ಳಿ: ನಾಲ್ವರು ಅಂತರ ಜಿಲ್ಲಾ ಕಳ್ಳರ ಬಂಧನ

ಹುಬ್ಬಳ್ಳಿ: ನಾಲ್ವರು ಅಂತರ ಜಿಲ್ಲಾ ಕಳ್ಳರ ಬಂಧನ

0

ಹುಬ್ಬಳ್ಳಿ: ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ.

Join Our Whatsapp Group

ಹಳೇ ಹುಬ್ಬಳ್ಳಿಯ ಎಸ್.ಎಂ.ಕೃಷ್ಣ ನಗರದಲ್ಲಿ ಈ ನಾಲ್ವರು ಮನೆಗಳ್ಳತನ  ಮಾಡಿದ್ದರು.

ಬಂಧಿತರಿಂದ 5 ಲಕ್ಷ ಮೌಲ್ಯದ 50 ಗ್ರಾಂ ಚಿನ್ನಾಭರಣ, 200 ಗ್ರಾಂ ಬೆಳ್ಳಿ ಸಾಮಾಗ್ರಿ, ಕಳ್ಳತನಕ್ಕೆ ಬಳಸಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರು ಕಸಬಾಪೇಟೆ, ಕೊಪ್ಪಳ ಶಹರ ಠಾಣೆಯಲ್ಲಿ ಕಳ್ಳತನ ಮಾಡಿದ್ದಾರೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.