ಬೆಂಗಳೂರು: ರಾಜ್ಯಾದ್ಯಂತ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡ್ತೇವೆ. 200 ಯೂನಿಟ್ ಒಳಗೆ ವಿದ್ಯುತ್ ಉಪಯೋಗಿಸುವ ಎಲ್ಲರಿಗೂ ಉಚಿತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನಿರ್ದಿಷ್ಟವಾಗಿ 200 ಯುನಿಟ್ ಉಚಿತ ವಿದ್ಯುತ್ ಎಂಬ ಗ್ಯಾರಂಟಿ ವಾಗ್ದಾನದ ಬಗ್ಗೆ ಅಪಸ್ವರ ಎದ್ದಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿಗಳು ಒಕ್ಕೊರಲಿಂದ ‘ಎಲ್ಲರಿಗೂ ಉಚಿತ ವಿದ್ಯುತ್ ನೀಡ್ತೇವೆ’ ಎಂದು ಹೇಳುತ್ತಿದ್ದಾರೆ.
ಆದರೆ ಪ್ರಕ್ರಿಯೆ ಬಗ್ಗೆ ಗೊಂದಲಗಳು ಎದ್ದಿರುವುದು ಜನಕ್ಕೆ ಸಮಾಧಾನ ತಂದಿಲ್ಲ. ಈ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಧಾನಸೌಧದಲ್ಲಿ ಮಾತನಾಡಿ ಸ್ಪಷ್ಟನೆ ನೀಡಿದ್ದು, ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಬಳಸುವವರಿಗೆ ಮಾತ್ರ ಈ ನಿಯಮ ಅನ್ವಯ ಆಗಲ್ಲ ಎಂದು ಪುನರುಚ್ಚರಿಸಿದ್ದಾರೆ.