ಮನೆ ಕ್ರೀಡೆ WTC ಫೈನಲ್ ಗೆ ಭಾರತ ತಂಡ ಆರಿಸಿದ ಇರ್ಫಾನ್ ಪಠಾಣ್

WTC ಫೈನಲ್ ಗೆ ಭಾರತ ತಂಡ ಆರಿಸಿದ ಇರ್ಫಾನ್ ಪಠಾಣ್

0

ಆಸ್ಟ್ರೇಲಿಯಾ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯಕ್ಕೆ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಭಾರತ ತಂಡದ ತಮ್ಮ ನೆಚ್ಚಿನ ಪ್ಲೇಯಿಂಗ್ XI ಆಯ್ಕೆ ಮಾಡಿದ್ದಾರೆ. ಆದರೆ, ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಆಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡುವ ಮೂಲಕ ಕೆ.ಎಸ್ ಭರತ್ ಅವರನ್ನು ಕೈ ಬಿಟ್ಟಿದ್ದಾರೆ.

Join Our Whatsapp Group

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ಬುಧವಾರದಿಂದ ಲಂಡನ್ ನ ದಿ ಓವಲ್ ಮೈದಾನದಲ್ಲಿ ಆರಂಭವಾಗಲಿದೆ. ಈ ಪಂದ್ಯದ ನಿಮಿತ್ತ ಎರಡೂ ತಂಡಗಳು ಸಜ್ಜಾಗುತ್ತಿವೆ. ಅಂದಹಾಗೆ ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XI ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹಲವು ಮಾಜಿ ಕ್ರಿಕೆಟಿಗರು ಭಾರತ ತಂಡದ ತಮ್ಮ ನೆಚ್ಚಿನ ಆಟಗಾರರನ್ನು ಆಯ್ಕೆ ಮಾಡಿದ್ದಾರೆ.

ಅದರಂತೆ ಭಾರತ ತಂಡದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಅವರು ತಮ್ಮ ನೆಚ್ಚಿನ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿದ್ದಾರೆ. ಕೆ.ಎಸ್ ಭರತ್ ಬದಲಿಗೆ ವಿಕೆಟ್ ಕೀಪರ್ ಆಗಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಲು ಇಶಾನ್ ಕಿಶನ್ಗೆ ಅವಕಾಶ ನೀಡಿದ್ದಾರೆ. ಅಂದಹಾಗೆ ಕಳೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕೆ.ಎಸ್ ಭರತ್ ಕೇವಲ 101 ರನ್ ಗಳಿಸಿದ್ದರು. ಈ ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಗೆದ್ದಿತ್ತು.

ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಅವರನ್ನು ಇನಿಂಗ್ಸ್ ಆರಂಭಿಸಲು ಆಯ್ಕೆ ಮಾಡಿದ ಇರ್ಫಾನ್ ಪಠಾಣ್, ಮೂರನೇ ಕ್ರಮಾಂಕಕ್ಕೆ ಚೇತೇಶ್ವರ್ ಪೂಜಾರ, ನಾಲ್ಕನೇ ಕ್ರಮಾಂಕಕ್ಕೆ ವಿರಾಟ್ ಕೊಹ್ಲಿ ಹಾಗೂ ಐದನೇ ಕ್ರಮಾಂಕಕ್ಕೆ ಅಜಿಂಕ್ಯ ರಹಾನೆ ಅವರನ್ನು ಆರಿಸಿದ್ದಾರೆ. ಸ್ಪೆಷಲಿಸ್ಟ್ ಬ್ಯಾಟ್ಸ್ಮನ್ ಆಗಿ ಇಶಾನ್ ಕಿಶನ್ ಅವರನ್ನು ಮಾಜಿ ಆಲ್ ರೌಂಡರ್ ಆಯ್ಕೆ ಮಾಡಿದ್ದಾರೆ.

ಇನ್ನು ಆಲ್ ರೌಂಡರ್ ವಿಭಾಗಕ್ಕೆ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ ಪಠಾಣ್, ಮತ್ತೊಂದು ಸ್ಥಾನಕ್ಕೆ ಆರ್ ಅಶ್ವಿನ್ ಅಥವಾ ಶಾರ್ದುಲ್ ಠಾಕೂರ್ ಅವರಲ್ಲಿ ಒಬ್ಬರನ್ನು ಹೆಸರಿಸಿದ್ದಾರೆ. ವೇಗದ ಬೌಲರ್ಗಳಾಗಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಉಮೇಶ್ ಯಾದವ್ ಅವರನ್ನು ಆಯ್ಕೆ ಮಾಡಿದ್ದಾರೆ.

“ಇಂಗ್ಲೆಂಡ್ ನಲ್ಲಿ ಬೇಸಿಗೆಯ ಆರಂಭ ಇದಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಮತ್ತು ಪಿಚ್ ಕಂಡೀಷನ್ಸ್ ಅನ್ನು ಗಮನದಲ್ಲಿಟ್ಟುಕೊಂಡು ಆರ್ ಅಶ್ವಿನ್ ಅಥವಾ ಶಾರ್ದುಲ್ ಠಾಕೂರ್ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕು,'” ಎಂದು ಇರ್ಫಾನ್ ಪಠಾಣ್ ಟ್ವೀಟ್ ಮಾಡಿದ್ದಾರೆ.

ಆರ್ ಅಶ್ವಿನ್ ಇಂಗ್ಲೆಂಡ್ನಲ್ಲಿ ಆಡಿದ್ದ 7 ಟೆಸ್ಟ್ ಪಂದ್ಯಗಳಿಂದ 18 ವಿಕೆಟ್ಗಳನ್ನು ಕಬಳಿಸಿದ್ದಾರೆ. ಮತ್ತೊಂದೆಡೆ ಶಾರ್ದುಲ್ ಠಾಕೂರ್ ಅವರು ಇಂಗ್ಲೆಂಡ್ನಲ್ಲಿ ಆಡಿದ ಮೂರು ಪಂದ್ಯಗಳಿಂದ 7 ವಿಕೆಟ್ಗಳನ್ನು ಕಿತ್ತಿದ್ದಾರೆ. ಇವರಿಬ್ಬರ ನಡುವೆ ಆರ್ ಅಶ್ವಿನ್ ಇಂಗ್ಲೆಂಡ್ನಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.

ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಇರ್ಫಾನ್ ಪಠಾಣ್ ಆರಿಸಿದ ಭಾರತ ಪ್ಲೇಯಿಂಗ್ XI

1. ರೋಹಿತ್ ಶರ್ಮಾ

2.ಶುಭಮನ್ ಗಿಲ್

3. ಚೇತೇಶ್ವರ್ ಪೂಜಾರ

4. ವಿರಾಟ್ ಕೊಹ್ಲಿ

5. ಅಜಿಂಕ್ಯ ರಹಾನೆ

6. ಇಶಾನ್ ಕಿಶನ್ (ವಿ.ಕೀ)

7. ರವೀಂದ್ರ ಜಡೇಜಾ

8. ಆರ್ ಅಶ್ವಿನ್/ಶಾರ್ದುಲ್ ಠಾಕೂರ್

9. ಮೊಹಮ್ಮದ್ ಶಮಿ

10. ಉಮೇಶ್ ಯಾದವ್

11. ಮೊಹಮ್ಮದ್ ಸಿರಾಜ್