ಮನೆ ಅಪರಾಧ ಮೈಸೂರು: ತಮಿಳುನಾಡು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ತಮಿಳುನಾಡು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

0

ಮೈಸೂರು: ತಮಿಳುನಾಡು ಮೂಲದ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ ನ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

Join Our Whatsapp Group

ತಮಿಳುನಾಡು ರಾಜ್ಯದ ನೀಲಗಿರಿ ಎಂಬ ಜಿಲ್ಲೆಯ ವಿದ್ಯಾರ್ಥಿನಿ ನಗರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ನಗರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಮೀಪದಲ್ಲಿಯೇ ಇರುವ ಹಾಸ್ಟೆಲ್‌ ನಲ್ಲಿ ಉಳಿದುಕೊಂಡಿದ್ದರು. ಬುಧವಾರ 1.30 ರ ಸಮಯದಲ್ಲಿ ಹಾಸ್ಟೆಲ್‌ ನ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

4ನೇ ಸೆಮಿಸ್ಟರ್‌ನಲ್ಲಿ ಫೇಲ್ ಆಗಿದ್ದೆ ಎಂಬ ಬೇಸರದಲ್ಲಿದ್ದರು. ಈ ಕಾರಣದಿಂದ ಆತ್ಮಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮೈಸೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.