ಮೈಸೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕೈಹಿಡಿದ ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿದ್ದಾರೆ.
ವರುಣಾ ಕ್ಷೇತ್ರದಿಂದ ಗೆಲುವು ಸಾಧಿಸಿ ಸಿಎಂ ಹುದ್ದೆಗೇರಿರುವ ಸಿದ್ಧರಾಮಯ್ಯ ಅವರು ಇದಕ್ಕೆ ಕಾರಣರಾದ ಕ್ಷೇತ್ರ ಜನರಿಗೆ ಜೂನ್ 10ರಂದು ಕೃತಜ್ಞತಾ ಸಭೆ ಆಯೋಜಿಸಿದ್ದಾರೆ. ವರುಣ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ.
ಸಿಎಂ ಆದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಸಿದ್ಧರಾಮಯ್ಯ ಆಗಮಿಸುವ ಹಿನ್ನಲೆ, ಸಿದ್ದರಾಮಯ್ಯಗೆ ಭರ್ಜರಿ ಸ್ವಾಗತ ಕೋರಲು ಕಾಂಗ್ರೆಸ್ ಮುಖಂಡರು ಸಿದ್ಧತೆ ನಡೆಸುತ್ತಿದ್ದಾರೆ.
ಈ ಹಿನ್ನಲೆ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರಿಂದ ಪೂರ್ವಭಾವಿ ಸಭೆ ನಡೆಯಿತು. ವಿವಿಧ ಕಲಾ ತಂಡಗಳ ಮೂಲಕ ಸಿದ್ಧರಾಮಯ್ಯಗೆ ಸ್ವಾಗತ ಕೋರುವುದು ಮತ್ತು ಕಾರ್ಯಕ್ರಮಕ್ಕೆ 50ಸಾವಿರ ಜನ ಕರೆ ತರಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ ವಿಜಯ್ ಕುಮಾರ್, ನಗರಾಧ್ಯಕ್ಷ ಮೂರ್ತಿ, ಕಾಂಗ್ರೆಸ್ ಮುಖಂಡರಾದ ಮರೀಗೌಡ, ಮಂಜುಳಾ ಮಾನಸ ಸೇರಿದಂತೆ ಇತರರು ಭಾಗಿಯಾಗಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.