ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಾಧಿಸಿರುವ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಡೆಡ್ ಲೈನ್ ನೀಡಿದ್ದಾರೆ.
ಇದೇ ಜೂನ್ 30ರೊಳಗೆ ಎಲ್ಲಾ ಶಾಸಕರ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಗಡುವು ನೀಡಿದ್ದಾರೆ. ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದಾರೆ.
ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಬಾರಿ ದಾಖಲೆಗಳ ಸಮೇತ ಮತ್ತೆ ಆಸ್ತಿ ವಿವರ ಸಲ್ಲಿಸಬೇಕು. ಕಳೆದ ಬಾರಿ ಶಾಸಕರು ಸರಿಯಾದ ಮಾದರಿಯಲ್ಲಿ ಆಸ್ತಿ ವಿವರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಸಮಸ್ಯೆ ಆಗಬಾರದೆಂದು ಶಾಸಕರ ಕಡ್ಡಾಯ ಆಸ್ತಿ ವಿವರ ಪಡೆಯಲು ಲೋಕಾಯುಕ್ತ ಸೆಕ್ರೆಟರಿಗೆ ಸೂಚಿಸಿದ್ದಾರೆ.
ಜನಪ್ರತಿನಿಧಿಗಳು ಕಡ್ಡಾಯವಾಗಿ ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ ನೀಡಲೇ ಬೇಕಾಗಿರುವುದು ಕಾನೂನು. ಆದರೆ ಆಸ್ತಿ ವಿವರ ನೀಡುವಂತೆ ಲೋಕಾಯುಕ್ತ ಇಲಾಖೆ ಜನಪ್ರತಿನಿಧಿಗಳಿಗೆ ಹಲವು ಬಾರಿ ನೋಟೀಸ್ ನೀಡಿದ್ದರೂ, ಜನಪ್ರತಿನಿಧಿಗಳು ಅದರ ಬಗ್ಗೆ ತಲೆಕೆಡಿಸಿಕೊಳ್ಳದ ಸಾಕಷ್ಟು ನಿದರ್ಶನಗಳಿವೆ.
ಲೋಕಾಯುಕ್ತ ನಿಯಮ ಏನು ಹೇಳುತ್ತದೆ ?
ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ.
ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.