ಮನೆ ಮನರಂಜನೆ ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾ ರಿಲೀಸ್

ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾ ರಿಲೀಸ್

0

ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಟೀಸರ್ ಫ್ಯಾಮಿಲಿ ಎಂಟರ್​ಟೇನರ್ ರೀತಿಯಲ್ಲಿ ಮೂಡಿಬರಲಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ಒದಗಿಸಿದೆ.

ಕ್ರಿಕೆಟರ್​ ಎಂ.ಎಸ್​. ಧೋನಿ ಅವರು ತಮ್ಮ  ‘ಧೋನಿ ಎಂಟರ್​ಟೇನ್​ಮೆಂಟ್’ ಮೂಲಕ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಅವರು ನಿರ್ಮಿಸುತ್ತಿರುವ ಮೊದಲ ಸಿನಿಮಾ ತಮಿಳು ಭಾಷೆಯದೇ ಅನ್ನೋದು ವಿಶೇಷ. ಈ ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್​ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಸಖತ್ ಫನ್ನಿ ಆಗಿದೆ. ಸದ್ಯ ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಹಬುದು ಎಂಬ ಸ್ಪಷ್ಟನೆ ಪ್ರೇಕ್ಷಕರಿಗೆ ಸಿಕ್ಕಿದೆ.

Join Our Whatsapp Group

ಧೋನಿಗೂ ತಮಿಳುನಾಡಿಗೂ ಉತ್ತಮ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಟೀಸರ್ ಫ್ಯಾಮಿಲಿ ಎಂಟರ್​ಟೇನರ್ ರೀತಿಯಲ್ಲಿ ಮೂಡಿಬರಲಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ಒದಗಿಸಿದೆ. ಸಿನಿಮಾ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ರಮೇಶ್ ತಮಿಳ್​ಮಣಿ ಅವರು ಚಿತ್ರವನ್ನು ನಿರ್ದೇಶನ ಮಾಡಿದರೆ, ಸಾಕ್ಷಿ ಸಿಂಗ್ ಧೋನಿ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾ ಕಥೆ ಬಗ್ಗೆ ರಮೇಶ್ ಹೇಳಿದ್ದರು.  ‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿತ್ತು. ಇದೇ ವಿಚಾರದ ಮೇಲೆ ಸಿನಿಮಾ ಮಾಡಿದ್ದೇವೆ. ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಮಾದರಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ’ ಎಂದು ರಮೇಶ್ ಅವರು ಈ ಮೊದಲು ಮಾಹಿತಿ ಹಂಚಿಕೊಂಡಿದ್ದರು.