ಮನೆ ಉದ್ಯೋಗ NBAIR: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

NBAIR: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್​ಸೆಕ್ಟ್ ರಿಸೋರ್ಸಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Join Our Whatsapp Group

ಒಟ್ಟು 1 ಪ್ರಾಜೆಕ್ಟ್​ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಜೂನ್ 15, 2023ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:

ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್​ಸೆಕ್ಟ್ ರಿಸೋರ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ ​ಸೆಕ್ಟ್ ರಿಸೋರ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:

ಮಾಸಿಕ ₹ 18,000

ಉದ್ಯೋಗದ ಸ್ಥಳ:

ಬೆಂಗಳೂರು

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:

ICAR-ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್

ಹೆಬ್ಬಾಳ

ಬೆಂಗಳೂರು-560024

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 08/06/2023

ಸಂದರ್ಶನ ನಡೆಯುವ ದಿನ: ಜೂನ್ 15, 2023 ಬೆಳಗ್ಗೆ 11 ಗಂಟೆಗೆ