ಮನೆ ಸುದ್ದಿ ಜಾಲ ಮೈಸೂರು: ಪ್ರಾಯೋಗಿಕವಾಗಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ತೀರ್ಮಾನ

ಮೈಸೂರು: ಪ್ರಾಯೋಗಿಕವಾಗಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ತೀರ್ಮಾನ

0

ಮೈಸೂರು: ನಗರದ ದೇವರಾಜ ಅರಸು ರಸ್ತೆ, ಸಯ್ಯಾಜಿ ರಾವ್ ರಸ್ತೆ, ಅಶೋಕ ರಸ್ತೆ ಹಾಗೂ ಪುರಭವನದಲ್ಲಿ ಪ್ರಾಯೋಗಿಕವಾಗಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಯಿತು.

Join Our Whatsapp Group


 ನಿನ್ನೆ(ಶುಕ್ರವಾರ) ನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಮೇಯರ್ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

 ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ಹೆಚ್ಚುತ್ತಿದೆ. ಈ ಸಮಸ್ಯೆ ಪರಿಹರಿಸಲು ಒಟ್ಟು 7 ಕಡೆಗ ಳಲ್ಲಿ ಪೇ ಆ್ಯಂಡ್ ಪಾರ್ಕ್ ಜಾರಿಗೊಳಿಸಲು ಪಾಲಿಕೆ ಸಿದ್ಧತೆ ಕೈಗೊಂಡಿತ್ತು. ಆದರೆ ಮೊದಲ ಹಂತದಲ್ಲಿ ನಾಲ್ಕು ಕಡೆಗಳಲ್ಲಿ ಪ್ರಾಯೋಗಿಕ ವಾಗಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಿ ಸಾಧಕ ಬಾಧಕವನ್ನು ನೋಡಿಕೊಂಡು ಎರಡನೇ ಹಂತದಲ್ಲಿ ವಿನೋಬಾ ರಸ್ತೆ, ಹರ್ಷ ರಸ್ತೆ, ಧನ್ವಂತ್ರಿ ರಸ್ತೆಯಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರುವುದು ಸೂಕ್ತ ಎಂದು ಸಭೆ ಅಭಿಪ್ರಾಯಪಟ್ಟಿತು.

ನಗರದ ದೇವರಾಜ ಅರಸು ರಸ್ತೆ, ಸಯ್ಯಜಿ ರಾವ್ ರಸ್ತೆ, ಅಶೋಕ ರಸ್ತೆ ಹಾಗೂ ಪುರಭವನದಲ್ಲಿ ದ್ವಿ ಚಕ್ರ ವಾಹನಗಳಿಗೆ ಮೊದಲ ಎರಡು ಗಂಟೆಗೆ 10 ರೂ., ನಂತರದ ಪ್ರತಿ ಗಂಟೆಗೆ 10 ರೂ. ಶುಲ್ಕ, ನಾಲ್ಕು ಚಕ್ರದ ವಾಹನಗಳಿಗೆ ಮೊದಲ ಎರಡು ಗಂಟೆಗೆ 30 ರೂ., ನಂತರದ ಪ್ರತಿ ಗಂಟೆಗೆ 20 ರೂ. ಶುಲ್ಕ ವಿಧಿಸಲು ಸಭೆ ಒಪ್ಪಿಗೆ ಸೂಚಿಸಿತು.