ಮನೆ ರಾಜಕೀಯ ಸಿದ್ದರಾಮಯ್ಯ ಅವರಿಗೆ ರುದ್ರಾಕ್ಷಿ ಮಾಲೆ ಹಾಕಿ ಆಶೀರ್ವದಿಸಿದ ಸುತ್ತೂರು ಶ್ರೀಗಳು

ಸಿದ್ದರಾಮಯ್ಯ ಅವರಿಗೆ ರುದ್ರಾಕ್ಷಿ ಮಾಲೆ ಹಾಕಿ ಆಶೀರ್ವದಿಸಿದ ಸುತ್ತೂರು ಶ್ರೀಗಳು

0

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿರುವ ನಾಡಿನ ಪ್ರಮುಖ ಮಠಗಳಲ್ಲಿ ಒಂದಾಗಿರುವ ಸುತ್ತೂರು ಶ್ರೀ ಕ್ಷೇತ್ರಕ್ಕೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು.

Join Our Whatsapp Group

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀಗಳು ರುದ್ರಾಕ್ಷಿ ಮಾಲೆಯನ್ನು ಕೊರಳಿಗೆ ಹಾಕಿ ಆಶೀರ್ವದಿಸಿದರು.

ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಿಎಂ ಶ್ರೀಗಳೊಂದಿಗೆ ಮಾತುಕತೆ ನಡೆಸಿದರು. ಸಚಿವ ವೆಂಕಟೇಶ್ ಸೇರಿದಂತೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.