ಮನೆ ಅಪರಾಧ ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

0

ಭರಮಸಾಗರ: ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್ ಬಳಿ ನಡೆದಿದೆ.

Join Our Whatsapp Group

ಬೆಂಗಳೂರು ಮೂಲದ ಕುಟುಂಬವೊಂದು ಗೋವಾ ಪ್ರವಾಸ ಮುಗಿಸಿ ಹಿಂತಿರುಗುವ ವೇಳೆ ವಿಜಾಪುರ ಬಳಿ ಲಾರಿಯನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಲಾರಿಗೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಸುಮಾರು 25 ವರ್ಷದ ಒರ್ವ ಪುರುಷ ಮತ್ತು 28 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಹೆಸರುಗಳನ್ನು ಪತ್ತೆಹಚ್ಚಲು ಇನ್ನೂ ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಉಳಿದ ನಾಲ್ವರಿಗೆ ತೀವ್ರ ಗಾಯಾಳುಗಳಾಗಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.