ಮನೆ ಕಾನೂನು ಉಪ-ಲೋಕಾಯುಕ್ತರ ಜಿಲ್ಲಾ ಪ್ರವಾಸ

ಉಪ-ಲೋಕಾಯುಕ್ತರ ಜಿಲ್ಲಾ ಪ್ರವಾಸ

0

ಮೈಸೂರು: ಜೂ.16 ರಿಂದ 20 ರವರೆಗೆ ಉಪ-ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದು, ಜೂ.17ರ ಬೆಳಿಗ್ಗೆ 10 ರಿಂದ 1:30 ರವರೆಗೆ ಮತ್ತು 2:30 ರಿಂದ 5 ರವರೆಗೆ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿದ್ದಾರೆ.

Join Our Whatsapp Group

ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ತಮಗೆ ಕಾನೂನು ರೀತಿಯ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಉಪಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ.

ಜೂ.19 ರ ಬೆಳಿಗ್ಗೆ 10 ರಿಂದ 1:30 ರ ವರೆಗೆ ಮತ್ತು 2:30ರಿಂದ 4:30 ರ ವರೆಗೆ “ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪಲೋಕಾಯುಕ್ತರ ಕಾರ್ಯ ವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿಯ ವಿಚಾರಣೆ ನಡೆಸಲಾಗುತ್ತದೆ. ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮೈಸೂರು ವಿಭಾಗದಲ್ಲಿನ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ಅಧೀಕ್ಷಕರಾದ ಎಸ್.ಸುರೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.