ಮನೆ ರಾಜಕೀಯ ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

0

ಬೆಂಗಳೂರು: ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Join Our Whatsapp Group

ಇಂದು ಮಾತನಾಡಿದ ಅವರು, ಮಧ್ಯ ಪ್ರದೇಶದಲ್ಲೂ ನಾವು 5 ಗ್ಯಾರಂಟಿಗಳ  ಭರವಸೆ ನೀಡಿದ್ದೇವೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಎಲ್ಲಾ ರಾಜ್ಯಗಳಲ್ಲೂ ಒಂದೇ ರೀತಿಯ ಪ್ರಣಾಳಿಕೆ ಇರಲ್ಲ. ಆಯಾ ರಾಜ್ಯಗಳ ಅಗತ್ಯಕ್ಕೆ ತಕ್ಕಂತೆ ಪ್ರಣಾಳಿಕೆ ಮಾಡುತ್ತೇವೆ.  ಒಂದು ರಾಜ್ಯದ ಪ್ರಣಾಳಿಕೆ ಇನ್ನೊಂದು ರಾಜ್ಯದ ಪ್ರಣಾಳಿಕೆಗೆ ಅನ್ವಯ ಆಗಲ್ಲ ಎಂದು ತಿಳಿಸಿದರು.