ಮನೆ ರಾಜಕೀಯ ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದೆ ಎಂದ ಡಿಕೆ ಶಿವಕುಮಾರ್ ಆಕ್ರೋಶ

ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದೆ ಎಂದ ಡಿಕೆ ಶಿವಕುಮಾರ್ ಆಕ್ರೋಶ

0

ಮೈಸೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿಗೆ ಮಾಡಿರುವ ಬಗ್ಗೆ ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ಅವರು ಜುಲೈ 1ರಿಂದ ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಪುಕ್ಸಟ್ಟೆ ಅಕ್ಕಿ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Join Our Whatsapp Group

, ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಛತ್ತಿಸ್ ಗಡ್, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ನಮಗೆ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ. ಈ ಬಗ್ಗೆ ರಾಜ್ಯದಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ತಾರಕಕ್ಕೇರಿದ ಅಕ್ಕಿ ಪಾಲಿಟಿಕ್ಸ್

ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಅಕ್ಕಿ ಪಾಲಿಟಿಕ್ಸ್ ತಾರಕಕ್ಕೇರಿದೆ. ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಸಮರ ಸಾರಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ಕೇಸರಿ ಕಲಿಗಳು ಮುಗಿಬಿದ್ದಿದ್ದು, ಉಭಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪಗಳನ್ನ ಮಾಡುತ್ತಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಜುಲೈ 1ರಿಂದ 10 ಕೆಜಿ ಆಹಾರ ಧಾನ್ಯ: ಯಾರಿಗೆಲ್ಲ ಉಚಿತ?

ಕೇಂದ್ರ ಸರ್ಕಾರದ ನಿಲುವಿನಿಂದ ರಾಜ್ಯ ಸರ್ಕಾರ ಅಡಕತ್ತರಿಗೆ ಸಿಲುಕಿದ್ದು, ಅನ್ನಭಾಗ್ಯ ಯೋಜನೆಯ ಅಡಿ 10 ಕೆಜಿ ಉಚಿತ ಅಕ್ಕಿ ನೀಡಲು ಕಾಂಗ್ರೆಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ. ಇನ್ನ ಕಾಂಗ್ರೆಸ್-ಬಿಜೆಪಿ ಕಾದಾಟದಿಂದಾಗಿ ಜುಲೈ 1ರಿಂದ ಜಾರಿಯಾಗಬೇಕಿರುವ 10 ಕೆಜಿ ಉಚಿತ ಅಕ್ಕಿ ಯೋಜನೆ ಅನುಷ್ಠಾನ ವಿಳಂಬವಾಗುವ ಸಾಧ್ಯತೆಯಿದೆ.

ರೈತರ ಸಲಹೆ

ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದ ಬಳಿ ಹೆಚ್ಚುವರಿ ಅಕ್ಕಿ ಪಡೆಯಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸಲಹೆ ನೀಡಿದ್ದಾರೆ. ರಾಜ್ಯದ ರೈತರಿಂದಲೇ ನೇರವಾಗಿ ಭತ್ತ, ರಾಗಿ, ಜೋಳ ಖರೀದಿಸಿ ಅನ್ನಭಾಗ್ಯಕ್ಕೆ ಉಪಯೋಗಿಸಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮನವಿ ಮಾಡಿದ್ದಾರೆ.

ಡಿಕೆಗೆ ಭರ್ಜರಿ ಸ್ವಾಗತ

ಡಿಸಿಎಂ ಆದ ಬಳಿಕ ಮೊದಲ ಬಾರಿ ಮೈಸೂರಿಗೆ ಆಗಮಿಸಿದ ಡಿಕೆಶಿಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಡಿ.ಕೆ.ಶಿವಕುಮಾರ್ ಆಗಮನ ಆಗ್ತಿದ್ದಂತೆ ಜೈ ಕಾರ ಮೊಳಗಿದ್ವು. ಡಿಕೆಶಿಗೆ ಹೂಗುಚ್ಛ ನೀಡಿ ಕಾಂಗ್ರೆಸ್ ಮುಖಂಡರು ಶುಭ ಕೋರಿದರು. ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿದ ಡಿಸಿಎಂ ಎಲ್ರಿಗೂ ಅಭಿನಂದನೆ ಸಲ್ಲಿಸಿದರು.