ಮನೆ ಅಪರಾಧ ಕುಶಾಲನಗರದಲ್ಲಿ ಬೈಕ್​ ಅಪಘಾತ: ಕಾಲೇಜು ವಿದ್ಯಾರ್ಥಿನಿ ಸಾವು

ಕುಶಾಲನಗರದಲ್ಲಿ ಬೈಕ್​ ಅಪಘಾತ: ಕಾಲೇಜು ವಿದ್ಯಾರ್ಥಿನಿ ಸಾವು

0

ಕೊಡಗು: ಬೈಕ್​ ಅಪಘಾತದಲ್ಲಿ ಎಫ್ ಎಂಸಿ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

Join Our Whatsapp Group

ಮಡಿಕೇರಿಯ ಭಾವನಾ(21) ಮೃತ ವಿದ್ಯಾರ್ಥಿನಿ.

ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್​ ಸ್ಕೂಟಿಗೆ ಅಪ್ಪಳಿಸಿದೆ. ಈ ವೇಳೆ ವಿದ್ಯಾರ್ಥಿನಿ ಮೃತಳಾಗಿದ್ದು, ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.