ಮನೆ ರಾಜ್ಯ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Join Our Whatsapp Group

ಬಿಜೆಪಿ ಅವಧಿಯಲ್ಲಿ ಕೋಮು ರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿ ಮಾತನಾಡಿದರು.

ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ  ಎಂದು ಹೇಳಿದರು.

ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ  ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿಗಳಾದ ನಾಸಿರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.