ಮನೆ ರಾಜಕೀಯ ಮೋದಿಯ ಅಕ್ಕಿ, ಸಿದ್ದರಾಮಯ್ಯನ ಜಾತ್ರೆ: ಸಿಎಂ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಮೋದಿಯ ಅಕ್ಕಿ, ಸಿದ್ದರಾಮಯ್ಯನ ಜಾತ್ರೆ: ಸಿಎಂ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

0

ಮೈಸೂರು: ಕೇಂದ್ರ ಸರ್ಕಾರ ಕೇವಲ 1 ಕೆಜಿಗೆ 3 ರೂ. ನಂತೆ 5 ಕೆಜಿ ಅಕ್ಕಿ ಕೊಡುತ್ತಿದ್ದರು. ಅದಕ್ಕೆ ತಮ್ಮ ಲೇಬಲ್ ಹಾಕೊಂಡು ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡ್ತಿದ್ರೀ. ಮೋದಿಯ ಅಕ್ಕಿ ಸಿದ್ದರಾಮಯ್ಯನ ಜಾತ್ರೆ ಅಂತ ನೀವು ಮಾಡ್ತಾ ಇದ್ರೀ ಎಂದು ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Join Our Whatsapp Group

ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲ ಬಾರಿ ಸತ್ಯ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 5 ಕೆಜಿ ಉಚಿತ ಅಕ್ಕಿ ಕೊಡುತ್ತಿದೆ ಎಂಬ ಸತ್ಯವನ್ನು ಈಗಲಾದರೂ ಹೇಳಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಚುನಾವಣೆ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದೀರಿ. ಕೇಂದ್ರ ಸರ್ಕಾರದ 5 ಕೆಜಿ ಜೊತೆಗೆ ನಿಮ್ಮ 10 ಕೆಜಿ ಸೇರಿಸಿ ಕೊಡಬೇಕು ತಾನೆ? ಎಂದು ಪ್ರಶ್ನಿಸಿದರು.

ಬಿ ಎಲ್‌ ಸಂತೋಷ್ ಅವರ ಬಗ್ಗೆ ಪದೇ ಪದೇ ಯಾಕೆ ಮಾತಾಡ್ತೀರಿ? ಬ್ರಾಹ್ಮಣರನ್ನು ದಿನವೂ ಯಾಕೆ ಬೈಯ್ತೀರಿ, ಯಾಕೆ ನಿಮಗೆ ಬ್ರಾಹ್ಮಣರ ಮೇಲೆ ಇಷ್ಟು ದ್ವೇಷ? ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರು ಅಲ್ವಾ? ಬಿ ಎಲ್ ಸಂತೋಷ್ ನಿಮಗೆ ಏನಾದರೂ ತಿವಿದಿದ್ದಾರಾ? ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಬಗ್ಗೆ ಎಂಬಿ ಪಾಟೀಲ್ ವ್ಯಂಗ್ಯ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಎಂ ಬಿ ಪಾಟೀಲ್ ಅವರೇ ನೀವು ನಿಜವಾಗಲೂ ಲಿಂಗಾಯತರಾ? ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು ಕಾಂಗ್ರೆಸ್ ಕುತಂತ್ರ ಅಲ್ವಾ? ಕಾಂಗ್ರೆಸ್ ಲಿಂಗಾಯತರಿಗೆ ಅನ್ಯಾಯ ಮಾಡಿದ್ರೂ ನೀವು ಸುಮ್ಮನೆ ಇದ್ರಿ. ದಿನೇಶ್ ಗುಂಡೂರಾವ್ ಯಡಿಯೂರಪ್ಪರನ್ನು ಹುಚ್ಚ ಅಂದಿದ್ದರು. ಆಗಲೂ ನಿಮ್ಮೊಳಗೆ ಲಿಂಗಾಯತ ಭಾವನೆ ಜಾಗೃತ ಆಗಲಿಲ್ಲವಲ್ಲ? ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ದ ಷಡ್ಯಂತ್ರ ಮಾಡಲು ಕಾಂಗ್ರೆಸ್‌ ನಿಂದ ಸುಫಾರಿ ತೆಗೆದುಕೊಂಡವರು ನೀವೆ ತಾನೇ? ಸಿದ್ದರಾಮಯ್ಯರು ಲಿಂಗಾಯತ ಧರ್ಮ ಒಡೆಯಲು ಹೋದಾಗ ಅದರ ಸುಫಾರಿ ಪಡೆದವರು ನೀವೆ ತಾನೇ? ಎಂದು ಹೇಳಿದರು.

ಈಗ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎನ್ನುವ ಮೂಲಕ ಒಕ್ಕಲಿಗರನ್ನು ಮುಗಿಸಲು ಹೊರಟ್ಟಿದ್ದೀರಾ? ನಿಮ್ಮ ಒಂದು ಹೇಳಿಕೆ ಪರಿಣಾಮ ಸಂಸದ ಡಿಕೆ ಸುರೇಶ್ ನಿಮ್ಮ ಕೈ ಎಳೆದಿದ್ದಾರೆ. ಇನ್ನೊಂದು ಬಾರಿ ಅಂತಹ ಹೇಳಿಕೆ ಕೊಡಿ ಡಿಕೆ ಸುರೇಶ್ ನಿಮ್ಮ ಕೊರಳ ಪಟ್ಟಿ ಹಿಡಿಯುತ್ತಾರೆ ಎಂದ ಪ್ರತಾಪ್‌ ಸಿಂಹ, ಎಂಬಿ ಪಾಟೀಲ್, ಸಿಎಂ ಸಿದ್ದರಾಮಯ್ಯ ಅವರ ಛೇಲಾ ಪಡೆಯ ಅಧ್ಯಕ್ಷ ಎಂದು ಕಿಡಿಕಾರಿದರು.