ಮನೆ ರಾಜ್ಯ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಕುಂಟು ನೆಪ ತೆಗೆದು ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ:...

ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಕುಂಟು ನೆಪ ತೆಗೆದು ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ: ಪ್ರಹ್ಲಾದ ಜೋಶಿ

0

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಜನರಿಂದ ಮತಗಳನ್ನು ಪಡೆಯುವಾಗ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಘೋಷಣೆ ಮಾಡಿದ್ದ ಕಾಂಗ್ರೆಸ್, ಇದೀಗ ಕೇಂದ್ರ ಸರಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಕುಂಟು ನೆಪ ತೆಗೆದಿದ್ದು ಇದು ಜನರಿಗೆ ಮಾಡುವ ಮೋಸವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

Join Our Whatsapp Group

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಪ್ರತಿಯೊಬ್ಬರಿಗೆ 5 ಕೆಜಿಯಂತೆ ಅಕ್ಕಿ ನೀಡುತ್ತಿದ್ದು ಕರ್ನಾಟಕಕ್ಕೂ ಅದೇ ಮಾದರಿಯಲ್ಲಿ ಅಕ್ಕಿ ದೊರೆಯುತ್ತಿದೆ ಆದರೆ ಕಾಂಗ್ರೆಸ್ ಘೋಷಿಸಿದಂತೆ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ನೀಡುವುದು ಆ ಪಕ್ಷದ ಜವಾಬ್ದಾರಿಯಾಗಿದೆ. ಹೆಚ್ಚುವರಿ ಐದು ಕೆಜಿಯನ್ನು ಘೋಷಣೆ ಮಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಕೇಳಿದ್ದರೆ ಅಥವಾ ಚುನಾವಣೆ ಸಂದರ್ಭದಲ್ಲಿ ಜನರಿಗೆ 10 ಕೆಜಿ ಅಕ್ಕಿಯ ನೀಡಿಕೆ ಘೋಷಣೆ ವೇಳೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 5 ಕೆ.ಜಿ ನೀಡಿದರೆ ಅಕ್ಕಿ ನೀಡುವುದಾಗಿ ಹೇಳಿದ್ದರೆ ಎಂದು ಪ್ರಶ್ನಿಸಿದರು.

ಚುನಾವಣೆಯಲ್ಲಿ ಮತ ಪಡೆಯುವುದಕ್ಕಾಗಿ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದ ಕಾಂಗ್ರೆಸ್, ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆಕೂರಿಸುವ ಯತ್ನಕ್ಕೆ ಮುಂದಾಗಿದೆ. ಕೇಂದ್ರ ಸರಕಾರ ಹೆಚ್ಚುರಿಯಾಗಿ ಅಕ್ಕಿ ನೀಡಲು ಸಾಧ್ಯವಿಲ್ಲ ಇಂತಿಷ್ಟು ಅಕ್ಕಿ ಸಂಗ್ರಹ ಇರಬೇಕೆಂಬ ನಿಯಮ ಇದೆ ಎಂದರು.

ಕಾಂಗ್ರೆಸ್ ಸರಕಾರ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರಂಟಿ ಗಳಿಗೆ ದಿನಕ್ಕೊಂದು ಷರತ್ತು ವಿಧಿಸುವ ಮೂಲಕ ಜನರಿಗೆ ಮೋಸ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಜೋಶಿ ಆರೋಪಿಸಿದರು.

ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರದ ವಿರುದ್ಧ ಪೋಸ್ಟ್ ಹಾಕುವವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಬಗ್ಗೆ ಪ್ರತಿಕ್ರಿಯಿಸಿ , ಅದೇ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಇಲ್ಲಸಲ್ಲದ ಹೇಳಿಕೆ ಹಾಕುವಾಗ ಇದು ನೆನಪಾಗಲಿಲ್ಲವೇ ಮುಖ್ಯಮಂತ್ರಿಯವರೇ, ಸರ್ವಾಧಿಕಾರ ಧೋರಣೆ ಸರಿಯಲ್ಲ ಜನರು ನಿಮಗೆ ನಿಮಗೆ ಅಧಿಕಾರ ನೀಡಿದ್ದು ವಿನಮ್ರತೆಯಿಂದ ಆಡಳಿತ ನಡೆಸುವ, ರಾಜ್ಯದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.