ಮನೆ ರಾಜಕೀಯ ಸನ್ಯಾಸತ್ವ ಸ್ವೀಕರಿಸಲು ಸಜ್ಜಾದ ರಾಜಕಾರಣಿ ಬಿ.ಜೆ.ಪುಟ್ಟಸ್ವಾಮಿ

ಸನ್ಯಾಸತ್ವ ಸ್ವೀಕರಿಸಲು ಸಜ್ಜಾದ ರಾಜಕಾರಣಿ ಬಿ.ಜೆ.ಪುಟ್ಟಸ್ವಾಮಿ

0

ಬೆಂಗಳೂರು(Bengaluru): ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜಕಾರಣಿಯೋರ್ವರು  ಸನ್ಯಾಸತ್ವ ಸ್ವೀಕರಿಸಲು ಸಜ್ಜಾಗಿದ್ದಾರೆ.

ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ(82) ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿಯಾಗಲು ತಯಾರಾಗುತ್ತಿದ್ದಾರೆ.‌

 ಬಿ.ಜೆ .ಪುಟ್ಟಸ್ವಾಮಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿದ್ದು, ಸನ್ಯಾಸತ್ವ ಸ್ವೀಕಾರಕ್ಕೆ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ.

ಮೇ 6 ರಂದು ಪುಟ್ಟಸ್ವಾಮಿ ಸನ್ಯಾಸ ದೀಕ್ಷೆಯನ್ನು ಪಡೆಯಲಿದ್ದಾರೆ. ಮೇ. 15 ರಂದು ಪುಟ್ಟಸ್ವಾಮಿ ಅವರಿಗೆ ಪಟ್ಟಾಭಿಷೇಕ ನಡೆಯಲಿದೆ. ರಾಜರಾಜೇಶ್ವರಿ ಜಯೇಂದ್ರ ಸ್ವಾಮೀಜಿ ಪುಟ್ಟಸ್ವಾಮಿ ಅವರಿಗೆ ಸನ್ಯಾಸ ದೀಕ್ಷೆ ನೀಡಲಿದ್ದಾರೆ.

ಗಾಣಿಗ ಸ್ವಾಮೀಜಿಗಳಾಗಿ ಪಟ್ಟಾಭಿಷೇಕ ಮಾಡಿಸಿಕೊಳ್ಳಲು ರೆಡಿಯಾಗಿರೋ ಬಿ.ಜೆ ಪುಟ್ಟಸ್ವಾಮಿ ಅವರ ಹೆಸರನ್ನು ಸಹ ಬದಲಾಯಿಸಲಾಗ್ತಿದೆ. ಬಿ.ಜೆ ಪುಟ್ಟಸ್ವಾಮಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿ ಎಂದು ನಾಮಕರಣ ಮಾಡಲಾಗ್ತಿದೆ.

ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿ.ಜೆ ಪುಟ್ಟಸ್ವಾಮಿ ಅವರು ರಾಜಕೀಯ ಕಾರ್ಯದರ್ಶಿ ಆಗಿದ್ದರು. ಯಡಿಯೂರಪ್ಪ ಜೊತೆಗೆ ಕೆಜೆಪಿಗೆ ಹೋಗಿ ಪರಿಷತ್ ಸ್ಥಾನ ಕಳೆದುಕೊಂಡಿದ್ದರು.  ಹಾವೇರಿಯಲ್ಲಿ ನಡೆದ B. S. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಜನತಾ ಪಕ್ಷ  ಜಾಥದಲ್ಲಿ ಭಾಗವಹಿಸಿದ್ದಕ್ಕಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿತ್ತು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಪರಿಷತ್ ಸ್ಥಾನಕ್ಕೆ ಆಯ್ಕೆ ವಿಚಾರದಲ್ಲಿ ಅವರು ಯಡಿಯೂರಪ್ಪ ವಿರುದ್ದ ಅಸಮಾಧಾನಗೊಂಡಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ನಾಯಕರಾದ ಬಿ.ಜೆ.ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ತಾವು ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದರು. ರಾಜ್ಯ ವಿರೋಧ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಧಾನದ ಬಳಿಕ ಪುಟ್ಟಸ್ವಾಮಿ ತಮ್ಮ ರಾಜೀನಾಮೆ ಹಿಂದೆ ಪಡೆದಿದ್ದರು. ಹಾಗೇ ಅವರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಮುಂದುವರಿಯಲು ಒಪ್ಪಿಕೊಂಡಿದ್ದರು.