ತುಮಕೂರು: ರಾಜ್ಯದಲ್ಲಿ 15 ಸಾವಿರ ಪೊಲೀಸರ ಹುದ್ದೆ ಖಾಲಿಯಿದ್ದು, ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗಿದೆ ಎಂದು ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ರೂ. ಮಂಜೂರು ಮಾಡಲಾಗಿದೆ. ಕೇಂದ್ರದಿಂದ ಶೇ.50, ರಾಜ್ಯ ಸರ್ಕಾರದಿಂದ ಶೇ.50ರಷ್ಟು ಅನುದಾನ ನೀಡಿದ್ದು, ಈಗಾಗಲೇ ಕೇಂದ್ರ ಸರ್ಕಾರ ಶೇ.45ರಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ 170 ಕಾಮಗಾರಿ ನಡೆಯುತ್ತಿದೆ. ನವೆಂಬರ್ಯೊಳಗೆ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.