ಮನೆ ರಾಜ್ಯ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ: ಡಿಜಿ-ಐಜಿಪಿ ಅಲೋಕ್ ಮೋಹನ್

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ: ಡಿಜಿ-ಐಜಿಪಿ ಅಲೋಕ್ ಮೋಹನ್

0

ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಹೇಳಿದರು.

Join Our Whatsapp Group

ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಸಭೆ ಮುಕ್ತಾಯ ಬಳಿಕ ಮಾತನಾಡಿದ ಅವರು, ಕಾನೂನು‌ ಸುವ್ಯವಸ್ಥೆ, ಟ್ರಾಫಿಕ್‌ ಸುಧಾರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಸಾರ್ವಜನಿಕರ ಜತೆ ಪೊಲೀಸರು ನಡವಳಿಕೆ ಉತ್ತಮವಾಗಿರಬೇಕು. ದೂರುಗಳು ಬಂದಾಗ ಕೂಡಲೇ ಪರಿಹರಿಸುವ ಕೆಲಸವಾಗಬೇಕು. ಈಗಾಗಲೇ ಎಲ್ಲಾ ಜಿಲ್ಲೆಗಳ ಎಸ್ ​ಪಿಗಳಿಗೆ ನಿರ್ದೇಶನ‌ ನೀಡಲಾಗಿದೆ. ಪೊಲೀಸ್ ಠಾಣೆಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಠಾಣೆಗಳ ಮುಂದೆ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಕುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಅಳವಡಿಸಲು ಸೂಚನೆ ನೀಡಲಾಗಿದೆ. ಕೆಲ ಠಾಣೆಗಳಲ್ಲಿ ಫೋನ್​ ನಂಬರ್ ಹಾಕದಿರುವ ಬಗ್ಗೆ ದೂರುಗಳಿವೆ. ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.