ಮನೆ ಅಪರಾಧ ರಾಕ್ ವ್ಯಾಲಿ ರೆಸಾರ್ಟ್‌ ನಲ್ಲಿ ವೇಶ್ಯಾವಾಟಿಕೆ ದಂಧೆ: 14 ಜನರ ಬಂಧನ, 6 ಯುವತಿಯರ ರಕ್ಷಣೆ

ರಾಕ್ ವ್ಯಾಲಿ ರೆಸಾರ್ಟ್‌ ನಲ್ಲಿ ವೇಶ್ಯಾವಾಟಿಕೆ ದಂಧೆ: 14 ಜನರ ಬಂಧನ, 6 ಯುವತಿಯರ ರಕ್ಷಣೆ

0

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂರಿನಲ್ಲಿರುವ ರಾಕ್ ವ್ಯಾಲಿ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹಲವರನ್ನು ಬಂಧಿಸಿದ್ದಾರೆ.

Join Our Whatsapp Group

ಕಳೆದ ಹಲವು ದಿನಗಳಿಂದ ರಾಕ್ ವ್ಯಾಲಿ ರೆಸಾರ್ಟ್​ನ ಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದುಬಂದಿತ್ತು. ಇದನ್ನು ಖಚಿತಪಡಿಸಿಕೊಂಡ ಕೋಲಾರ ಮಹಿಳಾ ಪೊಲೀಸ್ ಠಾಣೆ ಇನ್ಸ್​ ಪೆಕ್ಟರ್ ಬೈರರಾಮಪ್ಪ‌ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ಕಾರ್ಯಚರಣೆಯಲ್ಲಿ ಪೊಲೀಸರು 14 ಜನರನ್ನು ಬಂಧಿಸಿ, 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಮುಳಬಾಗಿಲು ತಾಲ್ಲೂಕು ಬೈರಕೂರು ಗ್ರಾಮದ ಬಳಿ ಇರುವ ರೆಸಾರ್ಟ್ ​ಗೆ ಹೈದರಾಬಾದ್ ಮೂಲದ‌ ಅಜಯ್ ಮಹಿಳೆಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದ, ದಾಳಿ ವೇಳೆ ಹೈದರಾಬಾದ್ ಮೂಲದ ಆರು ಮಹಿಳೆಯರನ್ನು ರಕ್ಷಣ ಮಾಡಲಾಗಿದ್ದು, ಸುಮಾರು ಹತ್ತಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.