ಮನೆ ಸುದ್ದಿ ಜಾಲ ಮೈಸೂರು: ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಮೈಸೂರು: ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

0

ಮೈಸೂರು: ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯು ಟಿ.ನರಸೀಪುರ ತಾಲೂಕಿನ ಆಲಗೂಡು ಗ್ರಾಮದ ಬಳಿ ನಡೆದಿದೆ.

Join Our Whatsapp Group

ಟಿ ನರಸೀಪುರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್​​ಎಲ್​ಸಿ ವಿದ್ಯಾರ್ಥಿಗಳು ಆಪೇ ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಟಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

 ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.