ಮನೆ ರಾಜ್ಯ ಬೆಂಗಳೂರು – ಧಾರವಾಡ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು – ಧಾರವಾಡ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಏಕಕಾಲಕ್ಕೆ ದೇಶದ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.

Join Our Whatsapp Group

ಪ್ರಧಾನಿ ಮೋದಿ ಅವರು ವಂದೇ ಭಾರತ್ ಟ್ರೈನ್ ಗೆ ಭೋಪಾಲ್ ನ ರಾಣಿ ಕಮಲಪಾಟಿ ರೈಲ್ವೇ ನಿಲ್ದಾಣದಲ್ಲಿ ಐದು ರೈಲುಗಳಿಗೆ ವರ್ಚ್ಯುವಲ್ ಮೂಲಕ ಹಸಿರು ನಿಶಾನೆ ತೋರಿಸಿದರು.

ರಾಣಿ ಕಮಲಾಪತಿ-ಜಬಲ್‌ಪುರ ವಂದೇ ಭಾರತ್ ಎಕ್ಸ್‌ ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ ಪ್ರೆಸ್, ಹತಿಯಾ-ಪಾಟ್ನಾ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು.

ಧಾರವಾಡದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಯಾಣ ಆರಂಭಿಸಿದ್ದು ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.