ಬೋಯಾಪಾಟಿ ಶ್ರೀನು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಬೋಯಾಪಾಟಿರಾಪೋ..’ ಉಸ್ತಾದ್ ರಾಮ್ ಪೋತಿನೇನಿ ನಟನೆಯ ಮಾಸ್ ಆಕ್ಷನ್ ಎಂಟರ್ ಟೈನರ್ ಕಥಾಹಂದರದ ಈ ಚಿತ್ರವನ್ನು ದಸರಾ ಪ್ರಯುಕ್ತ ಅಕ್ಟೋಬರ್ 20ರಂದು ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. ಆದರೀಗ ನಿಗದಿತ ಸಮಯಕ್ಕಿಂತಲೂ ಒಂದು ತಿಂಗಳು ಮುಂಚಿತವಾಗಿಯೇ ಸಿನಿಮಾ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ಸೆಪ್ಟಂಬರ್ 15ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಬೋಯಾಪಾಟಿರಾಪೋ ವಿಶ್ವಾದ್ಯಂತ ರಿಲೀಸ್ ಆಗಲಿದೆ.
ಲವರ್ ಬಾಯ್ ಆಗಿ ಮಿಂಚುತ್ತಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಬೋಯಾಪಾಟಿರಾಪೋ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಕನ್ನಡತಿ ಶ್ರೀಲೀಲಾ ರಾಮ್‌ಗೆ ಜೋಡಿಯಾಗಿ ನಟಿಸಿದ್ದಾರೆ.














