ಮನೆ ರಾಜ್ಯ ಎಸ್‌ಎಫ್‌ಎಸ್‌ ಕಂಪನಿ ಬೆಳಗಾವಿಯಲ್ಲಿ 250 ಕೋಟಿ ರೂ ಹೂಡಿಕೆ:ಬೆಳಗಾವಿಯಲ್ಲಿ 250 ಕೋಟಿ ರೂ. ಹೂಡಿಕೆ

ಎಸ್‌ಎಫ್‌ಎಸ್‌ ಕಂಪನಿ ಬೆಳಗಾವಿಯಲ್ಲಿ 250 ಕೋಟಿ ರೂ ಹೂಡಿಕೆ:ಬೆಳಗಾವಿಯಲ್ಲಿ 250 ಕೋಟಿ ರೂ. ಹೂಡಿಕೆ

0

ಬೆಂಗಳೂರು : ಆಪಲ್ ಫೋನ್ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದು, ಇದಕ್ಕಾಗಿ 30 ಎಕರೆ ಭೂಮಿಯನ್ನು ಕೇಳಿದೆ. ಇದು ಸ್ವಾಗತಾರ್ಹ ಪ್ರಸ್ತಾವನೆಯಾಗಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

Join Our Whatsapp Group

ತಮ್ಮನ್ನು ಬುಧವಾರ ಭೇಟಿಯಾಗಿದ್ದ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಫಾರಸ್ ಶಾ ನೇತೃತ್ವದ ನಿಯೋಗದ ಬೇಡಿಕೆಗಳನ್ನು ಕೇಳಿದ ಅವರು ಈ ಭರವಸೆ ನೀಡಿದ್ದಾರೆ. ಎಸ್‌ಎಫ್‌ಎಸ್‌ ಕಂಪನಿ ಈಗಾಗಲೇ ಬೆಳಗಾವಿಯಲ್ಲಿ ಏರೋಸ್ಪೇಸ್‌ ಉದ್ಯಮಕ್ಕೆ ಬೇಕಾಗುವ ಬಿಡಿಭಾಗಗಳನ್ನು ತಯಾರಿಸುತ್ತಿದೆ. ಈಗ ಅದು ಆಪಲ್‌ ಫೋನ್‌ಗೆ ಬೇಕಾಗುವ ಬಿಡಿಭಾಗಗಳ ತಯಾರಿಕಾ ಘಟಕವನ್ನು ರಾಜ್ಯದಲ್ಲಿ ತೆರೆಯಲು ಮನಸ್ಸು ಮಾಡಿದೆ. ಇದರಿಂದ ಮುಂದಿನ ಮೂರು ವರ್ಷಗಳಲ್ಲಿ 500 ಜನ ತಂತ್ರಜ್ಞರಿಗೆ ಉದ್ಯೋಗ ಸಿಗಲಿದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ. ಇದರ ಜತೆಗೆ ಪರೋಕ್ಷವಾಗಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಿಂದ ರಾಜ್ಯದ ಆರ್ಥಿಕತೆಗೂ ಲಾಭವಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.