ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನಗೊಂಡಿದ್ದಾರೆ.
ಮೃತರನ್ನು ಹರ್ಯಾಣದ ಪವನ್(28), ಸಂಜು(18), ಧರಮ್ವೀರ್(34) ಮತ್ತು ಬಿಹಾರದ ಛಾಪ್ರಾ ಮೂಲದ ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸಲಾಗಿದೆ.
ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ವಾಹನಗಳು ಸುಟ್ಟುಹೋಗಿದ್ದು 12 ಗೋವುಗಳು ಸಹ ಸುಟ್ಟು ಕರಕಲಾಗಿವೆ.
ಡಿಕ್ಕಿಯ ನಂತರ ಉಂಟಾದ ಬೆಂಕಿ ಎಲ್ಲಾ ಮೂರು ಟ್ರಕ್ ಗಳನ್ನುಆವರಿಸಿತ್ತು. ಈ ಘಟನೆಯಲ್ಲಿ ಒಂದು ಟ್ರಕ್ ನ ಚಾಲಕ ಸೇರಿದಂತೆ ಐದು ಜನರು ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ ಎಂದು ಜೈಪುರ ಗ್ರಾಮಾಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಿನೇಶ್ ಶರ್ಮಾ ತಿಳಿಸಿದ್ದಾರೆ.
ಎರಡು ಟ್ರಕ್ ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಅಧಿಕಾರಿ ಹೇಳಿದ್ದಾರೆ.
ಫೋರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದೆ.
ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪುರೋಹಿತ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.